ಮೈಸೂರು: ಕೆ.ಎನ್.ಸಿ ಇನ್ನೋವೆಟಿವ್ ಗ್ಲೋಬಲ್ ಶಾಲೆಯ 2023ನೇ ಸಾಲಿನ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯರಾದ ಕನಸು ಮತ್ತು ತಂಡದವರು ಅಸ್ಸಾಮೀ ಸಂಗೀತಕ್ಕೆ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಮನರಂಜಿಸಿದರು.
ಕೆಂಪು ಹಾಗೂ ಶ್ವೇತ ವರ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದ ವಿದ್ಯಾರ್ಥಿಗಳು ಅಸ್ಸಾಂನ ಸಂಸ್ಕೃತಿಯನ್ನು ವೇದಿಕೆಯ ಮೇಲೆ ನೃತ್ಯದ ಮೂಲಕ ಪ್ರಸ್ತುತ ಪಡಿಸಿದರು.
ಅಲ್ಲದೇ ವಿವಿಧ ತರಗತಿಯ ವಿದ್ಯಾರ್ಥಿಗಳು ವಿವಿಧ ನೃತ್ಯ ಪ್ರದರ್ಶನ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಡ್ಯದ ಶ್ರೀರಂಗಪಟ್ಟಣ ಪರಿವರ್ತನ ಶಾಲಾ ಮತ್ತು ಕಾಲೇಜಿನ ಮುಖ್ಯಸ್ಥರಾದ ಚೇತನ್ ರಾಮ್ ಆರ್.ಎ. ಆಗಮಿಸಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್ ವಹಿಸಿದ್ದರು.
ಸಮಾರಂಭದಲ್ಲಿ ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಕಾಲೇಜಿನ ಸಿಬ್ಬಂದಿ ಹಾಗೂ ಪೋಷಕರು ಉಪಸ್ಥಿತರಿದ್ದರು.