ಕೊಡಗು: ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚುನಾವಣಾ ಪ್ರಚಾರದ ವೇಳೆ ಹಿಟ್ ಅಂಡ್ ರನ್ ಗೆ ಬಿಜೆಪಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.
ಘಟನೆಯ ನಂತರ ಸ್ಥಳದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೊಂದು ಉದ್ದೇಶಪೂರ್ವಕ ಕೃತ್ಯ ಎಂದು ಆರೋಪಿಸಿರುವ ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಿದರು. ಗೊಂದಲದ ನಡುವೆಯೇ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಒಬ್ಬನನ್ನು ಬಂಧಿಸಲಾಗಿದೆ.