ಕೊಡಗು: ಪೊನ್ನಂಪೇಟೆ ತಾಲೂಕಿನ ಚೂರಿಕಾಡು ಗ್ರಾಮದ ಕಾಫಿ ತೋಟದಲ್ಲಿ ಇಬ್ಬರನ್ನು ಕೊಂದು ಆತಂಕ ಸೃಷ್ಟಿಸಿದ್ದ ಹುಲಿಯನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ನಿನ್ನೆಯಿಂದ ಅರಣ್ಯ ಇಲಾಖೆ ಹುಲಿ ಸೆರೆಗೆ ಸುತ್ತಲಿನ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮಾಡುತ್ತಿತ್ತು.ಇಂದು ಮುಂಜಾನೆಯಿಂದಲೇ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ, ಶಾರ್ಪ್ ಶೂಟರ್, ವೈದ್ಯರು ಮತ್ತು 100 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳ 8 ತಂಡ ಮಾಡಿ ಹುಡುಕಾಟ ಆರಂಭಿಸಿತ್ತು.
ಅಲ್ಲದೇ ಅಭಿಮನ್ಯು ನೇತೃತ್ವದ 4 ಸಾಕಾನೆಗಳನ್ನು ತಂದು ಹುಲಿ ಸೆರೆಗೆ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅ ಇಬ್ಬರನ್ನು ಬಲಿಪಡೆದ ಸ್ಥಳದಲ್ಲಿ ಬೋನ್ ಇಡಲಾಗಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ಸಕಲ ಕ್ರಮಗಳನ್ನು ಕೈಗೊಂಡಿತ್ತು.
ಹುಲಿ ಉಪವಲಯ ಅರಣ್ಯಾಧಿಕಾರಿ ರಂಜನ್ ಅವರ ಕಣ್ಣಿಗೆ ಕಾಣಿಸಿಕೊಂಡಿದೆ. ಆಗ ತಕ್ಷಣವೇ ಅವರು ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಸ್ವಲ್ಪ ದೂರು ಸಾಗಿದ ಹುಲಿ ಪ್ರಜ್ಞೆ ತಪ್ಪಿ ಬಿದ್ದಿತು. ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಕೂರ್ಗಳ್ಳಿಯ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಗಿದೆ.