ಕೊಡಗು: ವೀರಾಜಪೇಟೆ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಅಭಿ(21),ಹೆಚ್.ಎಸ್.ಸೂರ್ಯ(22) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 294 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ವೀರಾಜಪೇಟೆಯ ಮಾರಿ ದೇವಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.
ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube