ಮನೆ ರಾಜ್ಯ ಕೊಡವರು ಟಿಪ್ಪು ಸುಲ್ತಾನ್ ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್ ಗೆ ಹೆದರುತ್ತಾರೆಯೇ ?: ಪ್ರತಾಪ್ ಸಿಂಹ

ಕೊಡವರು ಟಿಪ್ಪು ಸುಲ್ತಾನ್ ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್ ಗೆ ಹೆದರುತ್ತಾರೆಯೇ ?: ಪ್ರತಾಪ್ ಸಿಂಹ

0

ಮೈಸೂರು(Mysuru): ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ  ಅವರು, ಕೊಡಗಿನಲ್ಲಿ ಶಾಂತಿ ಕದಡಿದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ. ಸಿದ್ದರಾಮಯ್ಯ ವಿರುದ್ದ ಕೊಡಗಿನ ಜನರಿಗೆ ಆಕ್ರೋಶವಿದೆ. ಸಿದ್ದರಾಮಯ್ಯ ಪದೇ ಪದೇ ಕೊಡಗಿನ ಜನರಿಗೆ ನೋವು ನೀಡಿದ್ದಾರೆ. ಕೊಡವರನ್ನು ಕೊಂದ ಟಿಪ್ಪು ಜಯಂತಿ ಮಾಡಿದ್ದಾರೆ. ಕೊಡಗಿನಲ್ಲಿ ಶಾಂತಿ ಕದಡಿದ್ದು ಸಿದ್ದರಾಮಯ್ಯ ಎಂದು ನೇರವಾಗಿ ಆರೋಪಿಸಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿದ ಅವರು,  ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ. ಅವರು ಸಹಾ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ. ಅವರು ಆ ರೀತಿ ಹೇಳಿದರೆ ಬಂದು ಸಾರ್ವಜನಿಕವಾಗಿ ಹೇಳಿ. ಆಗ ನಾವು ಒಪ್ಪಿಕೊಳ್ಳುತ್ತೇವೆ. ಹಂದಿ ಮಾಂಸ ಕೂಡ ಒಂದು ಆಹಾರ ಪದ್ಧತಿ. ಹಂದಿ ಮಾಂಸ ತಿನ್ನಬೇಡಿ ಎಂದು ಯಾವ ದೇವರು ಹೇಳಿಲ್ಲ. ಹಂದಿ ಮಾಂಸ ತಿನ್ನಲು ನಿಮ್ಮ ಜಮೀರ್​, ಬೆಂಬಲಿಗರಿಗೆ ಹೇಳಿ. ಅದನ್ನು ಹೇಳುವುದಕ್ಕೆ ನಿಮಗೆ ಧೈರ್ಯ ಇಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಮೊನ್ನೆ ಸಿದ್ದರಾಮೇಶ್ವರ ಜಾತ್ರೆಗೆ ಏಕೆ ಸಿಹಿ ಊಟ ಹಾಕಿಸಿದಿರಿ ಎಂದು ಪ್ರಶ್ನಿಸಿದರು. 2017ರಲ್ಲಿ ನಾಟಿಕೋಳಿ ತಿಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ್ದರು. ಇದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ಅದೇ ಕಾರಣಕ್ಕೆ ಮುಂದೆ ತಾಯಿ ಚಾಮುಂಡೇಶ್ವರಿ ಅವರಿಗೆ ಆ ಅವಕಾಶ ಕೊಡಲಿಲ್ಲ. ಈಗ ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ತತ್ವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ.

ಸಂಪತ್ ಬಿಜೆಪಿ ಕಾರ್ಯಕರ್ತ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಪೋಟೋ ಇದ್ದ ಮಾತ್ರಕ್ಕೆ ಆತ ಬಿಜೆಪಿ ಕಾರ್ಯಕರ್ತ ಆಗಲ್ಲ. ಆತ ನನ್ನ ಚುನಾವಣೆಯಲ್ಲೂ ಕಾಂಗ್ರೆಸ್ ಪರ ಕೆಲಸ ಮಾಡಿದ್ದಾನೆ ಎಂದು ಹೇಳಿದರು.