ಮನೆ ಉದ್ಯೋಗ ಕರ್ನಾಟಕ ತೈಲ ಒಕ್ಕೂಟದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ತೈಲ ಒಕ್ಕೂಟದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ತೈಲ ಒಕ್ಕೂಟ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಎಕ್ಸಿಕ್ಯೂಟಿವ್, ಮಾರ್ಕೆಟಿಂಗ್ ಆಫೀಸರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಆಸಕ್ತರು ಆನ್ ಲೈನ್/ ಆಫ್ ಲೈನ್ ಮೂಲಕ ಅರ್ಜಿ ಹಾಕಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಕೂಡಲೇ ಅರ್ಜಿ ಸಲ್ಲಿಸಿ.

ಹುದ್ದೆಯ ಮಾಹಿತಿ:

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 1

ಅಸಿಸ್ಟೆಂಟ್ ಮ್ಯಾನೇಜರ್ (ಪ್ರೊಕ್ಯೂರ್ ಮೆಂಟ್ ಮತ್ತು ಇನ್ ಪುಟ್)- 2

ಅಸಿಸ್ಟೆಂಟ್ ಮ್ಯಾನೇಜರ್ (ಕ್ವಾಲಿಟಿ ಅಶ್ಯೂರೆನ್ಸ್)- 1

ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- 1

ಮಾರ್ಕೆಟಿಂಗ್ ಆಫೀಸರ್ಸ್- 9

ಎಕ್ಸಿಕ್ಯೂಟಿವ್ (ಟೆಕ್ನಿಕಲ್)- 2

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್- 3

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್)-1

ವಿದ್ಯಾರ್ಹತೆ:

ಕರ್ನಾಟಕ ತೈಲ ಒಕ್ಕೂಟ ನೇಮಕಾತಿ ಅಧಿಸೂಚನೆ ಪ್ರಕಾರ, ವಿದ್ಯಾರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಬಿಎ, ಬಿಬಿಎಂ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ ಅಗ್ರಿ, ಎಂಬಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ತೈಲ ಒಕ್ಕೂಟ ನೇಮಕಾತಿ ಅಧಿಸೂಚನೆ ಪ್ರಕಾರ, ವಿದ್ಯಾರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 3 ವರ್ಷ

SC/ST ಅಭ್ಯರ್ಥಿಗಳು- 5 ವರ್ಷ

ವೇತನ:

ಮಾಸಿಕ ₹ 21,400-1,09,600

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ವ್ಯವಸ್ಥಾಪಕ ನಿರ್ದೇಶಕರು

ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಲ ನಿಯಂತ್ರಣ

ಬೆಂಗಳೂರು (KOF) ನಂ. 11

4 ನೇ ಮಹಡಿ

ಬ್ಲೂ ಕ್ರಾಸ್ ಚೇಂಬರ್ಸ್

ಇನ್ವೆಂಟರಿ ಕ್ರಾಸ್ ರೋಡ್

ಬೆಂಗಳೂರು – 01

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/03/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 25, 2023