ಕೋಲಾರ: ನಿಧಿ ಶೋಧಿಸುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಗ್ರಾಮಸ್ಥನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿರುವ ಘಟನೆ ಕೋಲಾರ ತಾಲೂಕಿನ ತ್ಯಾವನಹಳ್ಳಿಯ ಗಂಗಮ್ಮ ದೇಗುಲದಲ್ಲಿ ನಡೆದಿದೆ.
ತ್ಯಾವನಹಳ್ಳಿಯ ಆನಂದ್ & ಗ್ಯಾಂಗ್ ಮಂಜುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.
ಮಂಜುನಾಥನ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ಈ ವೇಳೆ ಸ್ಥಳಕ್ಕೆ ಗ್ರಾಮಸ್ಥರು ಬರುತ್ತಿದ್ದಂತೆ ಆನಂದ್ & ಗ್ಯಾಂಗ್ ಕಾಲ್ಕಿತ್ತಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಂಜುನಾಥ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Saval TV on YouTube