ಮನೆ ರಾಜ್ಯ ಕೋಲಾರ: ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲುವು

ಕೋಲಾರ: ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲುವು

0

ಟಿಕೆಟ್​ ಘೋಷಣೆಗೂ ಮುನ್ನ ಭಾರಿ ಕಗ್ಗಂಟಾಗಿ ಪರಿಣಮಿಸಿದ್ದ ಕೋಲಾರ ಮೀಸಲು ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು 67 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

Join Our Whatsapp Group

ಬಹುತೇಕ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೋಲಾರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು 63 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಮಲ್ಲೇಶ್‌ ಬಾಬು 6,68,831 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕೆ ವಿ ಗೌತಮ್​ ಸೋಲನುಭವಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷದಿಂದ ಕೆ.ವಿ. ಗೌತಮ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ ಅಭ್ಯರ್ಥಿಯಾಗಿ ಮಲ್ಲೇಶ್‌ಬಾಬು ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು. ಸದ್ಯದ ಫಲಿತಾಂಶ ಉಭಯ ನಾಯಕರಲ್ಲಿ ಎದೆಬಡಿತ ಹೆಚ್ಚಿಸಿತ್ತು. ಜೆಡಿಎಸ್​ನ ಮಲ್ಲೇಶ್​ ಬಾಬು ಮುನ್ನಡೆ ಸತತವಾಗಿ ಸಾಧಿಸಿ, ಇದೀಗ ಗೆಲುವಿನ ನಗೆ ಬೀರಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರದ ಎಂಟೂ ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ಮೇಲುಗೈ ಇದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ.

ಚುನಾವಣಾ ಘೋಷಣೆಯಾದ ದಿನದಿಂದ ಉಭಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಭರ್ಜರಿ ರೋಡ್​ ಶೋ ನಡೆಸುವ ಮೂಲಕ ಮತದಾರರ ಗಮನ ಸೆಳೆದಿದ್ದರು. ಕೇಸರಿ ಅಭ್ಯರ್ಥಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ ಅಭ್ಯರ್ಥಿ ಮಲ್ಲೇಶ್‌ಬಾಬು ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್​ ಅಭ್ಯರ್ಥಿ ಪರವಾಗಿ ಕೈ ನಾಯಕ ರಾಹುಲ್​ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ ಆದಿಯಾಗಿ ಹಲವರು ಭರ್ಜರಿ ಪ್ರಚಾರ ಕೈಗೊಂಡಿದ್ದರು. ಎಲ್ಲ ಘಟಾನುಘಟಿಗಳು ಕ್ಷೇತ್ರದ ಮತದಾರರ ಗಮನ ಸೆಳೆಯುಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭದ್ರತೆ: ಫಲಿತಾಂಶದ ಹಿನ್ನೆಲೆ ಮತ ಎಣಿಕೆ ಕೇಂದ್ರ ಮತ್ತು ನಗರದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಹಿರಿಯ ಪೊಲೀಸ್​ ಅಧಿಕಾರಿಗಳು ಸೇರಿದಂತೆ ಎಸಿಪಿಗಳು, ಸಿಪಿಐ, ಪಿಎಸ್ಐ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಣಿಕೆ ಕೇಂದ್ರ ಸೇರಿದಂತೆ ಎಲ್ಲಡೆ ಸಿಸಿಟಿವಿಗಳನ್ನು ಅಳವಡಿಸಲಾಗಿತ್ತು. ಯಾವುದೇ ರೀತಿ ಅಹಿತಕರ ಘಟನೆಗಳು ಸಂಭವಿಸದಂತೆ ತೀವ್ರ ನಿಗಾ ವಹಿಸಲಾಗಿದೆ.

ಹಿಂದಿನ ಲೇಖನಕೆ.ಎಸ್​. ಈ​ಶ್ವರಪ್ಪಗೆ ಭಾರೀ ಹಿನ್ನಡೆ: ಮೂರನೇ ಸ್ಥಾನಕ್ಕೆ ಕುಸಿತ
ಮುಂದಿನ ಲೇಖನಚಿತ್ರದುರ್ಗ ಕ್ಷೇತ್ರ: ಬಿ.ಎನ್​. ಚಂದ್ರಪ್ಪ ವಿರುದ್ಧ ಬಿಜೆಪಿ ಗೋವಿಂದ​ ಕಾರಜೋಳಗೆ ಮುನ್ನಡೆ