ಮನೆ ಅಪರಾಧ ಕೋಲಾರ : ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಯುವಕ ನೇಣಿಗೆ ಶರಣು

ಕೋಲಾರ : ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಯುವಕ ನೇಣಿಗೆ ಶರಣು

0

ಕೋಲಾರ : ಕುಟುಂಬದ ಪೋಷಕರ ಬುದ್ಧಿವಾದ ಸಹಿಸಲು ಸಾಧ್ಯವಾಗದೇ ಮನಸ್ಥಾಪಗೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮುಳಬಾಗಿಲು ತಾಲೂಕಿನ ಕುಂಬಾರಪಾಳ್ಯ ನಿವಾಸಿಯಾದ 29 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಗಣೇಶ್ ಮದುವೆಯಾಗಿ ಒಂದು ವರ್ಷ ಕಳೆದಿತ್ತು. ಇತ್ತೀಚೆಗೆ ಅವರು ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದು, ಕುಟುಂಬದ ಜವಾಬ್ದಾರಿಗಳ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದ್ದರು ಎಂದು ತಿಳಿದುಬಂದಿದೆ. ತಂದೆ ತಾಯಿ ಈ ವರ್ತನೆಯ ಬಗ್ಗೆ ಬುದ್ಧಿವಾದ ಹೇಳುತ್ತಿದ್ದರು. ‘ಜವಾಬ್ದಾರಿಯಿಂದ ಇರಬೇಕು, ಹೆಂಡತಿ ಹಾಗೂ ಮಕ್ಕಳನ್ನ ಸರಿಯಾಗಿ ನೋಡಿಕೊಳ್ಳಬೇಕು’ ಎಂಬ ಮಾತುಗಳು ಪ್ರತಿದಿನದಂತೆ ಮನೆಗೆ ತರಾಟೆಗೆ ಕಾರಣವಾಗಿದ್ದವು. ಆದರೆ ಈ ಮಾತುಗಳಿಂದ ಮನಸ್ತಾಪಗೊಂಡ ಗಣೇಶ್ ಕಳೆದ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ತನಿಖೆ ಆರಂಭಿಸಿದ್ದು, ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಗಣೇಶ್ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಣೆಯಾದ ಮೂಲ ಕಾರಣ ಇನ್ನು ಸ್ಪಷ್ಟವಾಗಿಲ್ಲವಾದರೂ, ಕುಟುಂಬದಲ್ಲಿ ನಡೆದ ಮಾತುಕತೆಗಳೇ ಪ್ರಭಾವಿಯಾಗಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ.