ಕೋಲ್ಕತ್ತ: ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಘಟನೆ (ಸಿಡಿಎಸ್‌ಸಿಒ) ಮತ್ತು ಪಶ್ಚಿಮ ಬಂಗಾಳ ಔಷಧಿ ನಿಯಂತ್ರಣ ನಿರ್ದೇಶನಾಲಯ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹6.6 ಕೋಟಿ ಮೌಲ್ಯದ ನಕಲಿ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಸಿಡಿಎಸ್‌ಸಿಒ ಪೂರ್ವ ವಲಯದ ಅಧಿಕಾರಿ ತಿಳಿಸಿದ್ದಾರೆ.
ಕ್ಯಾನ್ಸರ್, ಮಧುಮೇಹ ಸೇರಿದಂತೆ ಹಲವು ವಿಧಗಳ ನಕಲಿ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಐರ್ಲೆಂಡ್, ಟರ್ಕಿ, ಅಮೆರಿಕ ಮತ್ತು ಬಾಂಗ್ಲಾದೇಶ ಸೇರಿದಂತೆ ವಿವಿಧ ದೇಶಗಳ ಔಷಧಿ ಉತ್ಪಗಳನ್ನು ಭಾರತಕ್ಕೆ ಕಾನೂನುಬಾಹಿರವಾಗಿ ಆಮದು ಮಾಡಲಾಗಿದೆ. ಈ ಸಂಬಂಧ ಯಾವುದೇ ಪೂರಕ ದಾಖಲೆಗಳು ಹಾಜರುಪಡಿಸಿಲ್ಲ ಎಂದು ಅವರು ಹೇಳಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.














