ಮನೆ ಅಪರಾಧ ಕೊಪ್ಪಳ: ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು

ಕೊಪ್ಪಳ: ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು

0

ಕೊಪ್ಪಳ: ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು, ಮೊಮ್ಮಗ ಸೇರಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

Join Our Whatsapp Group

ಮೃತರನ್ನು ರಾಮೇಶ್ವರಿ ( 50), ಮಗಳು ವಸಂತಾ (32) ಹಾಗೂ ಮೊಮ್ಮಗ ಸಾಯಿಧರ್ಮ ತೇಜ(5) ಎಂದು ಗುರುತಿಸಲಾಗಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್ವರಿ, ಆಕೆಯ ಮಗಳು ವಸಂತಾ ಹಾಗೂ ಸಾಯಿಧರ್ಮ ತೇಜ ಅವರು ಹೊಸ ಲಿಂಗಾಪುರ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಅನುಮಾನಾಸ್ಪದ ಸಾವಿನ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.