ಕೋಟಾದ ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ನೀಟ್ ಆಕಾಂಕ್ಷಿಯ ಶವ ಪತ್ತೆಯಾಗಿದೆ.
ಒಡಿಶಾದ ನಿವಾಸಿಯಾಗಿರುವ ವಿದ್ಯಾರ್ಥಿ, ರಾಷ್ಟ್ರೀಯ ಅರ್ಹತಾ ಕಮ್ ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸಲು ಕೋಟಾಕ್ಕೆ ಬಂದಿದ್ದು, ವಿಜ್ಞಾನ ನಗರದಲ್ಲಿ ವಾಸಿಸುತ್ತಿದ್ದರು.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತನ ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕುಟುಂಬ ಕೋಟಾಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೋಟಾದಲ್ಲಿ ಕೇವಲ 17 ದಿನಗಳಲ್ಲಿ ಇದು ಮೂರನೇ ಪ್ರಕರಣವಾಗಿದೆ. ಕಳೆದ ವಾರ, ಎರಡು ಪ್ರತ್ಯೇಕ ಘಟನೆಗಳಲ್ಲಿ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ತಮ್ಮ ಪಿಜಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಒಬ್ಬರು ಹರಿಯಾಣದವರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶಕ್ಕೆ ಸೇರಿದವರು.














