ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಒಂದು ಪತ್ರಿಕೆಯನ್ನು ಮಾತ್ರ ಮುಂದೂಡಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ಹಿಂದೆ ಆ.25ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿತ್ತು. ಆದರೆ ಅಂದು ಐಪಿಬಿಎಸ್ ಪರೀಕ್ಷೆ ಇರುವ ಕಾರಣದಿಂದಾಗಿ ದಿನಾಂಕ ಬದಲಾವಣೆ ಮಾಡಲಾಗಿತ್ತು. ಇದೀಗ ಆ.27ಕ್ಕೆ ಪರೀಕ್ಷೆ ನಿಗದಿಯಾಗಿದೆ.
384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಸುಮಾರು 2,10,910 ಅಭ್ಯರ್ಥಿಗಳು ಬರೆಯಲಿದ್ದಾರೆ. ಆದರೆ ತರಾತುರಿಯಲ್ಲಿ ದಿನಾಂಕ ಘೋಷಣೆ ಮಾಡಲಾಗಿದೆ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
Saval TV on YouTube