ಬೆಂಗಳೂರು: ೨೦೨೩, ೨೪ ನೇ ಸಾಲಿನ ೩೮೪ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಕೆಪಿಎಸ್ ಸಿ ಪ್ರಭಾರಿ (ಇನ್ಚಾರ್ಜ್) ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ., ಅವರು ಈ ಅಧಿಸೂಚನೆ ಹೊರಡಿಸಿದ್ದಾರೆ.
ಇದೇ ಮಾರ್ಚ್ ೪ರಿಂದ ಆನ್ ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಏಪ್ರಿಲ್ ೩ ಅರ್ಜಿ ಸಲ್ಲಿಸಲು ಕಡೆಯ ದಿನ. ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ ೬೦೦, ಪ್ರವರ್ಗ ೨ಎ, ೨ಬಿ, ೩ಎ, ೩ಬಿಗಳಿಗೆ ೩೦೦, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ೫೦ ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ೧, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಮೇ ೫ ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈಕ) ಸೇರಿದಂತೆ ಒಟ್ಟಾರೆ ೩೮೪ ಹುದ್ದೆಗಳಲ್ಲಿ ಗ್ರೂಪ್ ಬಿ’ 159, ಗ್ರೂಪ್ ಬಿ’ ೨೨೫ ಹುದ್ದೆಗಳಿವೆ.
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಒಟ್ಟು ೭೭. ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹ. ಕನಿಷ್ಠ ೨೧ ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಲು ಅರ್ಹ. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ ೩೮, ಪ್ರವರ್ಗ ೨ಎ, ೨ಬಿ, ೩ಎ, ೩ಬಿಗಳಿಗೆ ೪೧ ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ೧ ಅಭ್ಯರ್ಥಿಗಳಿಗೆ ೪೩ ವರ್ಷ.
ಪೂರ್ವಭಾವಿ ಪರೀಕ್ಷೆ (ಬಹು ಆಯ್ಕೆ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ವಿವರವಾದ ಅಧಿಸೂಚನೆಗೆ kpsc.kar.nic.in ಭೇಟಿ ನೀಡಬಹುದು.