ಮನೆ ಉದ್ಯೋಗ ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಜೆಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಜಲ ಸಂಪನ್ಮೂಲ ಇಲಾಖೆಯಲ್ಲಿ 169 ಜೆಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

0

ಜಲ ಸಂಪನ್ಮೂಲ ಇಲಾಖೆಯಲ್ಲಿಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಇಲಾಖೆಯಲ್ಲಿ 169 ಜ್ಯೂನಿಯರ್​ ಇಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದ್ರಾಬಾದ್​- ಕರ್ನಾಟಕ ವೃಂದದಲ್ಲಿನ ಗ್ರೂಪ್​ ಸಿ ಹುದ್ದೆ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 17 ಆಗಿದೆ.

ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಯ ಹೆಸರು: ಜೂನಿಯರ್ ಇಂಜಿನಿಯರ್ (ಜೆಇ)
ಹುದ್ದೆಗಳ ಸಂಖ್ಯೆ: 169
ಉದ್ಯೋಗ ಸ್ಥಳ: ಕರ್ನಾಟಕ
ವೇತನ: 33450-62600 ರೂ. ಪ್ರತಿ ತಿಂಗಳು

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ  ಅಭ್ಯರ್ಥಿಗಳು: 335 ರೂ.
ಸಾಮಾನ್ಯ ಅಭ್ಯರ್ಥಿಗಳು: 635 ರೂ

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಅಕ್ಟೋಬರ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ನವೆಂಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18 ನವೆಂಬರ್ 2022

ಅಧಿಕೃತ ವೆಬ್‌ಸೈಟ್: kpsc.kar.nic.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.