ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 105 ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಅಂದರೆ ನವೆಂಬರ್ 17 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ನವೆಂಬರ್ 17, 2022ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ/ ಪ್ರವರ್ಗ-1 ಅಭ್ಯರ್ಥಿಗಳು-5 ವರ್ಷ
ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು-3 ವರ್ಷ
PH/ವಿಧವಾ ಅಭ್ಯರ್ಥಿಗಳು-10 ವರ್ಷ
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ ಪ್ರವರ್ಗ-1 & PH ಅಭ್ಯರ್ಥಿಗಳು- 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು-85 ರೂ.
ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು-335 ರೂ.
ಸಾಮಾನ್ಯ ಅಭ್ಯರ್ಥಿಗಳು-635 ರೂ.
ಅರ್ಜಿ ಸಲ್ಲಿಕೆ ವಿಧಾನ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/10/2022
ಅರ್ಜಿ ಸಲ್ಲಿಸಲು ಕೊನೆ ದಿನ: 17/11/2022
ಅರ್ಜಿ ಶುಲ್ಕ ಕಟ್ಟಲು ಕೊನೆ ದಿನ: 18/11/2022