ಮನೆ ಉದ್ಯೋಗ ಕೆಪಿಎಸ್​ ಸಿ ನೇಮಕಾತಿ; ಅರ್ಜಿ ಸಲ್ಲಿಕೆಗೆ ನವೆಂಬರ್​ 4 ಕಡೆಯ ದಿನ

ಕೆಪಿಎಸ್​ ಸಿ ನೇಮಕಾತಿ; ಅರ್ಜಿ ಸಲ್ಲಿಕೆಗೆ ನವೆಂಬರ್​ 4 ಕಡೆಯ ದಿನ

0

ಬೆಂಗಳೂರು: ಕರ್ನಾಟಕ ಲೋಕೋಪಯೋಗಿ ಇಲಾಖೆಯಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್​ ಎ ಶ್ರೇಣಿಯ ಒಟ್ಟು 42 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ.

Join Our Whatsapp Group

ಹುದ್ದೆ ವಿವರ: ಸಹಾಯಕ ಕಾರ್ಯಪಾಲಕ ಇಂಜಿನಿಯರ್​- 30, ಕಲ್ಯಾಣ ಕರ್ನಾಟಕಕ್ಕೆ 12 ಹುದ್ದೆ ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಸಿವಿಲ್​ ಇಂಜಿನಿಯರಿಂಗ್​ ಅಥವಾ ಕನ್ಸ್ಟ್ರಕ್ಷನ್​ ಟೆಕ್ನಾಲಾಜಿ ಅಂಡ್​ ಮ್ಯಾನೇಜ್​ಮೆಂಟ್​ ಇಂಜಿನಿಯರಿಂಗ್​ನಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿ ಕನಿಷ್ಠ 21 ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕ ಪಾವತಿಸಲಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮೂಲಕ ಆಯ್ಕೆ.

ಈ ಹುದ್ದೆಗಳಿಗೆ ಅಕ್ಟೋಬರ್​ 3ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಕಡೆಯ ದಿನಾಂಕ ನವೆಂಬರ್​ 4 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ kpsc.kar.nic.in ಇಲ್ಲಿಗೆ ಭೇಟಿ ನೀಡಿ.