ಮನೆ ಅಪರಾಧ ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ

0

ಬೆಳಗಾವಿ(Belagavi): ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು.

ಪ್ರಕರಣದ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಹುಕ್ಕೇರಿಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ಪರೀಕ್ಷಾರ್ಥಿಗಳ ಇಬ್ಬರು ಸಂಬಂಧಿಕರನ್ನು ಬಂಧಿಸಲಾಗಿದೆ. ಬಂಧಿತರು ಗದಗದಿಂದ ಬಂದಿದ್ದ ಪ್ರಶ್ನೆಪತ್ರಿಕೆಗೆ ಸರ್ಕಾರಿ ಕಾಲೇಜು ಅತಿಥಿ ಉಪನ್ಯಾಸಕ ಆದೇಶ ನಾಗನೂರಿ ಉತ್ತರವನ್ನು ಬಿಡಿಸಿದ್ದರು ಎಂದು ತಿಳಿದುಬಂದಿದೆ.

ಪರೀಕ್ಷಾರ್ಥಿಗಳ ಸಂಬಂಧಿಕರಾದ ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ಮಡಿವಾಳಪ್ಪ ತೋರಣಗಟ್ಟಿ ಹಾಗೂ ಹೊಸಕೋಟಿ ಗ್ರಾಮದ ಶಂಕರ ಉಣಕಲ್ ಎಂಬುವವರು ಅತಿಥಿ ಉಪನ್ಯಾಸಕನ ಬಳಿ ತಲಾ ಒಂದು ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದರು. ಆದ್ರೆ ಡಿವೈಸ್‌ಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಸಾಧ್ಯವಾಗಿರಲಿಲ್ಲ. ಬಂಧಿತರಿಂದ ಒಂದು ಕಾರು, ಎರಡು ಡಿವೈಸ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.