ಮನೆ ರಾಜಕೀಯ ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿ ಹಚ್ಚಿದ ಕೆ.ಎಸ್.ಈಶ್ವರಪ್ಪ

ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿ ಹಚ್ಚಿದ ಕೆ.ಎಸ್.ಈಶ್ವರಪ್ಪ

0

ಕಲಬುರಗಿ: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ  ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Join Our Whatsapp Group

ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಕಾಂಗ್ರೆಸ್​​ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು.

ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್​​’ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ

ಕಾಂಗ್ರೆಸ್​ ಸರ್ಕಾರ ಪಿಎಫ್’ಐ ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ ಪಿಎಫ್’ಐ ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಭಜರಂಗದಳ ರಾಷ್ಟ್ರಪ್ರೇಮಿ ಸಂಘಟನೆ. ಕಾಂಗ್ರೆಸ್ ಪ್ರಣಾಳಿಕೆ ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆಯಾಗಿದೆ. ಈ ಪ್ರಣಾಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕುತ್ತೇನೆ ಎಂದು ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದರು.

ಹಿಂದಿನ ಲೇಖನಮಂಗಳೂರಿನಲ್ಲಿ ಹೆಚ್ಚಿದ ನೀರಿನ ಸಮಸ್ಯೆ: ಕಟ್ಟಡ ಕಾಮಗಾರಿ, ವೆಹಿಕಲ್ ವಾಶ್ ನಿಷೇಧ
ಮುಂದಿನ ಲೇಖನವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿಯಿಂದ ಪಿತೂರಿ: ಎಚ್.ವಿಶ್ವನಾಥ್