ಮನೆ ಸುದ್ದಿ ಜಾಲ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ಭರ್ತಿಗೆ ಇದೀಗ ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು,  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 3ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದಾದೆ.

ಯಾವುದೇ ವಿಷಯದಲ್ಲಿ ಪದವಿ ಪಡೆದ ಪುರುಷ, ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ರೂ.37900- 70850 ವರೆಗೆ ವೇತನ ಸೌಲಭ್ಯ ಇರಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 10-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-03-2022
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 05-03-2022


ವಯೋಮಿತಿ ಅರ್ಹತೆಗಳು
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ, ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

ಆಯ್ಕೆಗೆ ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಇರಲಿದೆ.


ಅಪ್ಲಿಕೇಶನ್ಶುಲ್ಕ
ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.250
ಅರ್ಜಿ ಶುಲ್ಕವನ್ನು ಮಾರ್ಚ್‌ 05 ರೊಳಗಾಗಿ ಪಾವತಿಸಬೇಕು.

ಅರ್ಜಿ ಶುಲ್ಕವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಥವಾ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿಸಬೇಕು. ಅರ್ಜಿಯನ್ನು ಪೂರ್ಣ ಭರ್ತಿ ಮಾಡಿದ ನಂತರ ಚಲನ್‌ ಅನ್ನು ಸೃಜಿಸಿ ಬ್ಯಾಂಕ್ ಅಥವಾ ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆ ಹೇಗೆ?
– ರಾಜ್ಯ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://ksisfsi21.ksponline.co.in/ ವಿಳಾಸಕ್ಕೆ ಭೇಟಿ ನೀಡಿ.
– ಓಪನ್ ಆದ ಹೋಮ್‌ಪೇಜ್‌ನಲ್ಲಿ ‘NEW APPLICATION’ ಎಂಬಲ್ಲಿ ಕ್ಲಿಕ್ ಮಾಡಿ.
– ನಂತರ ಸೂಚನೆಗಳನ್ನು ಓದಿಕೊಂಡು ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ಅಪ್ಲಿಕೇಶನ್‌ ಪೂರ್ಣಗೊಳಿಸಬೇಕು.
– ಅರ್ಜಿ ಪೂರ್ಣಗೊಳಿಸಿದ ನಂತರ ಪ್ರಿಂಟ್‌ ತೆಗೆದುಕೊಂಡು ಮುಂದಿನ ರೆಫರೆನ್ಸ್‌ಗಾಗಿ ಇಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ http://ksisfsi21.ksponline.co.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಹಿಂದಿನ ಲೇಖನಶಾಲಾ ಕಾಲೇಜುಗಳಲ್ಲಿ ಸಹಜ,  ಶಾಂತಿ  ವಾತಾವರಣ ಕಾಪಾಡಲು ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ.
ಮುಂದಿನ ಲೇಖನನಾನು ಮುಖ್ಯಮಂತ್ರಿ, ಭಯೋತ್ಪಾದಕನಲ್ಲ: ಪ್ರಧಾನಿ ವಿರುದ್ಧ ಪಂಜಾಬ್ ಸಿಎಂ ಚನ್ನಿ ಕಿಡಿ