ಮೈಸೂರು: ಕೆಎಸ್ಓಯು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ವಾಟ್ಸಾಪ್ ಮೂಲಕ ಮಾರಾಟವಾಗಿರುವ ಕುರಿತು ಮಾಹಿತಿ ಬೆಳಕಿಗೆ ಬಂದಿದೆ.
ಕೆಎಸ್ಓಯು ಮಂಗಳೂರು ಕೇಂದ್ರದ ಸಿಬ್ಬಂದಿಯಿಂದಲೇ ಪ್ರಶ್ನೆ ಪತ್ರಿಕೆ ಮಾರಾಟವಾಗಿರುವ ಶಂಕೆ ವ್ಯಕ್ತವಾಗಿದೆ.
ಓರ್ವ ವಿದ್ಯಾರ್ಥಿ ಈ ಬಗ್ಗೆ ಪರಿಶೀಲನೆ ನಡೆಸಲು ಹಣ ನೀಡಿ ಪ್ರಶ್ನೆ ಪತ್ರಿಕೆ ತೆಗೆದುಕೊಂಡಿದ್ದು, ಪರೀಕ್ಷೆಗೆ ನೀಡಿದ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿದ ಪ್ರಶ್ನೆ ಪತ್ರಿಕೆ ಎರಡು ಒಂದೇ ಆಗಿದೆ.
೨೦೦೦ ರೂಪಾಯಿಗೆ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಲಾಗಿದೆ. ಈ ಕುರಿತು ಚಂದು.ಎಚ್.ಎಸ್. ಎಂಬ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದು, ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.