ಮಂಡ್ಯ : ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕನಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯಲ್ಲಿ ಇಂದು ನಡೆದಿದೆ.
ಮಳವಳ್ಳಿಯ ವಿನುಶ್ ಗೌಡ(10) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube