ಮನೆ ಅಪರಾಧ ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

0

ದೇವನಹಳ್ಳಿ(Devanahalli): ನಿಂತಿದ್ದ ಟ್ರ್ಯಾಕ್ಟರ್ ಗೆ ಕೆಎಸ್ ಆರ್ ಟಿಸಿ ಬಸ್ಸೊಂದು ಢಿಕ್ಕಿ ಹೊಡೆದಿರುವ ಘಟನೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ದೇವನಹಳ್ಳಿ ತಾಲ್ಲೂಕಿನ ಚಿಕ್ಕಸಣ್ಣೆ ಗೇಟ್ ಬಳಿ ಅವಘಡ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದರೂ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಲ್ಲಿನ ಲೋಡ್ ತುಂಬಿದ್ದ ಟ್ರ್ಯಾಕ್ಟರ್ ಪಂಕ್ಚರ್ ಆಗಿ ರಸ್ತೆಯಲ್ಲಿ ನಿಂತಿತ್ತು. ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆಯುವುದಕ್ಕೂ ಮುನ್ನ ಕಾರೊಂದಕ್ಕೆ ಗುದ್ದಿತ್ತು. ಆದರೆ, ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು.

ಘಟನೆ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ವಿಭಾಗದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹಿಂದಿನ ಲೇಖನ`ವಿಶ್ವ ತಂಬಾಕು ಮುಕ್ತ ದಿನ’ ಆಚರಣೆ
ಮುಂದಿನ ಲೇಖನಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ : ಯದುವೀರ್