ಮನೆ ರಾಜ್ಯ ಟೈರ್ ಸ್ಫೋಟಗೊಂಡು ಕೆಎಸ್’ಆರ್’ಟಿಸಿ ಬಸ್ ಪಲ್ಟಿ: ಚಾಲಕ ಸಾವು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಟೈರ್ ಸ್ಫೋಟಗೊಂಡು ಕೆಎಸ್’ಆರ್’ಟಿಸಿ ಬಸ್ ಪಲ್ಟಿ: ಚಾಲಕ ಸಾವು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0

ಹುಬ್ಬಳ್ಳಿ(Hubballi): ಟೈರ್ ಸ್ಫೋಟಗೊಂಡು ಕೆಎಸ್ಆರ್’ಟಿಸಿ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶೆರೆವಾಡ ಸಮೀಪ ನಡೆದಿದೆ.

ಬಸ್ ಪಲ್ಪಿಯಾದ್ದರಿಂದ ಬಸ್’ನಡಿ ಪ್ರಯಾಣಿಕರು ಸಿಲುಕಿ, ರಕ್ಷಿಸುವಂತೆ ಗೋಗರೆದಿರುವುದು ಮನಕಲಕುವಂತಿದೆ. ಆದರೆ ಸ್ಥಳೀಯರು ನಿಸ್ಸಹಾಯಕರಾಗಿ ನಿಂತು ಸಮಾಧಾನ ಮಾಡಿದ್ದಾರೆ.

KA 25 F 3097 ಸಂಖ್ಯೆಯ ಬಸ್ ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾಗ ಶೆರೆವಾಡ ಗ್ರಾಮದ ಬಳಿ ಏಕಾಏಕಿ ಟೈಯರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾಗುತ್ತಿದಂತೆ ಚಾಲಕ ಬಸ್ನಡಿ ಸಿಲುಕಿದ್ದಾರೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ರವೀಂದ್ರ ಬಿಂಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನವೈಯಕ್ತಿಕ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ಬಳಸಿ ಅರ್ಜಿ ಸಲ್ಲಿಸಿದ್ದ 2 ದಂತ ವೈದ್ಯಕೀಯ ಕಾಲೇಜುಗಳಿಗೆ ಹೈಕೋರ್ಟ್ ದಂಡ
ಮುಂದಿನ ಲೇಖನಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್: ವಿದ್ಯಾರ್ಥಿನಿ ಸ್ಥಿತಿ ಗಂಭೀರ