ಮನೆ ರಾಜ್ಯ ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ

0

ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್‌.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದರು.

ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನ ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್‌ಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿ, ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕುಮಾರಸ್ವಾಮಿ ಅವರು ಮನುವಾದಿ ಆಗಿಬಿಟ್ಟಿದ್ದಾರೆಂದು ಕಿಡಿಕಾರಿದರು. ಇನ್ನು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಅವರಿಗೆ ಏನು ಅನಿಸಿದೆಯೋ ಅದನ್ನ ಕೇಂದ್ರಕ್ಕೆ ಬರೆದಿದ್ದಾರೆ. ಅದೆಲ್ಲ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಅಂತ ತಿಳಿಸಿದರು.