ಮನೆ ರಾಜ್ಯ ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

0

ಬೆಂಗಳೂರು: ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Our Whatsapp Group

ಆದರೆ ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಲಿಫ್ಟ್ ಮಾಡಲು ಕೇಂದ್ರ ರೈಲ್ವೆ  ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ.

ಅಪಘಾತದಲ್ಲಿ ಶಾಂತಕುಮಾರ್ ಅವರಿಗೆ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಶಾಂತಕುಮಾರ್ ಅವರನ್ನು ಏರ್​ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ(ಫೆಬ್ರವರಿ 14) ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಈ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ವಿವಿಧ ಬೇಡಿಕೆಗಳ ಆಗ್ರಹಿಸಿ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಇಂದು (ಫೆಬ್ರವರಿ 14) ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿತ್ತು.