ಮನೆ ರಾಜ್ಯ ಕುವೈತ್‌ ಅಗ್ನಿ ದುರಂತ: ಕೇರಳ ಮೂಲದ ಮೃತರ ಕುಟುಂಬಗಳಿಗೆ  5 ಲಕ್ಷ ಆರ್ಥಿಕ ನೆರವು

ಕುವೈತ್‌ ಅಗ್ನಿ ದುರಂತ: ಕೇರಳ ಮೂಲದ ಮೃತರ ಕುಟುಂಬಗಳಿಗೆ  5 ಲಕ್ಷ ಆರ್ಥಿಕ ನೆರವು

0

ತಿರುವನಂತಪುರಂ: ಕುವೈತ್‌ ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕೇರಳ ಮೂಲದ ಕುಟುಂಬಗಳಿಗೆ ₹ 5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಇಲ್ಲಿನ (ಕೇರಳ) ಸರ್ಕಾರ ಗುರುವಾರ ಹೇಳಿದೆ.

Join Our Whatsapp Group

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಅಧಿಕೃತ ಮಾಹಿತಿ ಪ್ರಕಾರ ಅವಘಡದಲ್ಲಿ ಕೇರಳದ 19 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ₹4 ಲಕ್ಷ ಆರ್ಥಿಕ ನೆರವು ನೀಡಲು ಕ್ಯಾಬಿನೆಟ್ ನಿರ್ಧರಿಸಿದೆ. ಅಲ್ಲದೇ  ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರನ್ನು ತಕ್ಷಣವೇ ಕುವೈತ್‌ಗೆ ಕಳುಹಿಸಲು ನಿರ್ಧರಿಸಲಾಗಿದೆ.

ಪ್ರಮುಖ ಉದ್ಯಮಿಗಳಾದ ಎಂ.ಎ ಯೂಸುಫ್ ಅಲಿ ಮತ್ತು ರವಿ ಪಿಳ್ಳೈ ಅವರು ಅಗ್ನಿ ಅವಘಡದಲ್ಲಿ ಮೃತಪಟ್ಟ ಕೇರಳೀಯರ ಕುಟುಂಬಗಳಿಗೆ ಕ್ರಮವಾಗಿ ₹ 5 ಲಕ್ಷ ಮತ್ತು ₹ 2 ಲಕ್ಷ  ನೀಡುವುದಾಗಿ ಸಿಎಂಗೆ ತಿಳಿಸಿದ್ದಾರೆ.

ಕುವೈತ್‌ನ ದಕ್ಷಿಣದಲ್ಲಿರುವ ಅಹ್ಮದಿ ಆಡಳಿತ ಪ್ರಾಂತ್ಯದ ಮಂಗಾಫ್ ಪ್ರದೇಶದ ಆರು ಮಹಡಿಗಳ ಕಟ್ಟಡವೊಂದರ ಅಡುಗೆ ಮನೆಯಲ್ಲಿ ಬುಧವಾರ ಬೆಳಿಗ್ಗೆ ಹೊತ್ತಿಕೊಂಡ ಬೆಂಕಿಯು ಈ ದುರಂತಕ್ಕೆ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕಟ್ಟಡದಲ್ಲಿ ಒಂದೇ ಕಂಪನಿಯ 195 ಮಂದಿ ಕೆಲಸಗಾರರು ವಾಸಿಸುತ್ತಿದ್ದರು ಎನ್ನಲಾಗಿದೆ.

ಮೃತರಲ್ಲಿ ಹೆಚ್ಚಿನವರು ಭಾರತೀಯರಾಗಿದ್ದು, ಅವರೆಲ್ಲ 20ರಿಂದ 50 ವರ್ಷ ವಯಸ್ಸಿನ ನಡುವಿನವರು ಎಂದು ವಿಧಿವಿಜ್ಞಾನ ಇಲಾಖೆಯ ಮಹಾನಿರ್ದೇಶಕ ಮೇಜರ್ ಜನರಲ್ ಇದ್ ಅಲ್–ಒವೈಹಾನ್ ಅವರು ತಿಳಿಸಿದ್ದಾರೆ.

ಹಿಂದಿನ ಲೇಖನಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ
ಮುಂದಿನ ಲೇಖನರೇಣುಕಾಸ್ವಾಮಿ ಹತ್ಯೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಭೇಟಿ: ಪರಿಶೀಲನೆ