ಮನೆ ಉದ್ಯೋಗ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 25 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇವೆ. ಫೆಬ್ರವರಿ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಹುದ್ದೆಯ ಮಾಹಿತಿ:

ಪ್ರೊಫೆಸರ್-5

ಅಸೋಸಿಯೇಟ್ ಪ್ರೊಫೆಸರ್- 5

ಅಸಿಸ್ಟೆಂಟ್ ಪ್ರೊಫೆಸರ್- 15

ವಿದ್ಯಾರ್ಹತೆ: ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್- ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ಡಿ ಅಸಿಸ್ಟೆಂಟ್ ಪ್ರೊಫೆಸರ್- ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, M.Phil, Ph.D

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 24, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:

ಪ್ರೊಫೆಸರ್- ಮಾಸಿಕ ₹ 1,44,200-2,18,200

ಅಸೋಸಿಯೇಟ್ ಪ್ರೊಫೆಸರ್- ಮಾಸಿಕ ₹ 1,31,400-2,17,100

ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 57,700-1,82,400

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 24, 2023

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು http://www.kvafsu.edu.in./recruitment.html ಈ ವೆಬ್ಸೈಟ್ ಗೆ ಭೇಟಿ ನೀಡಿ.

ಅರ್ಜಿ ಶುಲ್ಕ:

SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ- 500 ರೂ.

ಜನರಲ್ ಅಭ್ಯರ್ಥಿಗಳಿಗೆ- 1000 ರೂ.

ಪಾವತಿಸುವ ಬಗೆ- ಆನ್ಲೈನ್

ಆಯ್ಕೆ ಪ್ರಕ್ರಿಯೆ:

ಶೈಕ್ಷಣಿಕ ಅರ್ಹತೆ

ಅನುಭವ

ದಾಖಲಾತಿ ಪರಿಶೀಲನೆ

ಸಂದರ್ಶನ