ಬೆಂಗಳೂರು: ದಶಕಗಳ ಕನಸಾಗಿದ್ದ ಗ್ರಾಮೀಣ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸ್ ಪಾಸ್ ಬಗ್ಗೆ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತು ಕೊಟ್ಟಿದ್ದೆ. ಆ ಬೇಡಿಕೆ ಈಡೇರಿಸಿ ಜಾರಿಗೆ ನೀಡಿದ್ದೇನೆ. ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ನುಡಿದಂತೆ ನಡೆದು ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಘಟಕದ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಟಿವಿ9 ರಾಜಕೀಯ ವಿಭಾಗ ಮುಖ್ಯಸ್ಥ ಪ್ರಮೋದ್ ಶಾಸ್ತ್ರಿ, ನ್ಯೂಸ್18 ರಾಜಕೀಯ ಬ್ಯೂರೋ ಮುಖ್ಯಸ್ಥ ಚಿದಾನಂದ ಪಟೇಲಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೆ.ವಿ.ಪ್ರಭಾಕರ್ ಗೆ ಸನ್ಮಾನ:
ಬಸ್ ಪಾಸ್ ಸೌಲಭ್ಯವನ್ನು ದೊರಕಿಸಿ ಕೊಡಲು ಸಹಕರಿಸಿದ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನೂ ಕೆಯುಡಬ್ಲೂಜೆ ಸನ್ಮಾನಿಸಿತು.