Saval TV on YouTube
ಮೈಸೂರು: ಗ್ರಾಮದಲ್ಲಿ ಯಾರಾದರೂ ಸಾವನ್ನಪ್ಪಿದ್ದರೆ ಕಾಲುವೆ ದಾಟಿ, ಹೊಂಡ, ಗುಂಡಿ ಹತ್ತಿಳಿದು, ಕೆಸರು ಗದ್ದೆಯಂತಹ ರಸ್ತೆಯಲ್ಲಿ ಶವ ಹೊತ್ತೊಯ್ಯಬೇಕಾದ ದುಸ್ಥಿತಿ ಟಿ.ನರಸೀಪುರ ತಾಲೂಕಿನ ಮಾರನಪುರ ಗ್ರಾಮದ್ದಾಗಿದೆ.
ಈ ಸಮಸ್ಯೆಯಿಂದ ಬೇಸತ್ತಿರುವ ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಗರಂ ಆಗಿದ್ದಾರೆ.
ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸುಸಜ್ಜಿತವಾದ ರಸ್ತೆಯ ವ್ಯವಸ್ಥೆ ಇಲ್ಲದಿರುವ ಕಾರಣ ಜನರು ಮೈಲಿಗಟ್ಟಲೆ ಶವವನ್ನು ಹೊತ್ತುಕೊಂಡು ಹಳ್ಳ ಕೊಳ್ಳಗಳನ್ನು ದಾಟಿ ಸ್ಮಶಾನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಪಡಿಸದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.