ಮನೆ ಕಾನೂನು ಲಖೀಂಪುರ ಗಲಭೆ, ಆಶಿಷ್‌ ಮಿಶ್ರಾ ಜಾಮೀನು ರದ್ದು

ಲಖೀಂಪುರ ಗಲಭೆ, ಆಶಿಷ್‌ ಮಿಶ್ರಾ ಜಾಮೀನು ರದ್ದು

0

ನವದೆಹಲಿ; ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಆಶಿಷ್‌ ಮಿಶ್ರಾ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಫೆಬ್ರವರಿಯಲ್ಲಿ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಸೋಮವಾರ ಸುಪ್ರೀಂಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾ ಲಖೀಂಪುರ ಖೇರಿ ಗಲಭೆ ಪ್ರಕರಣದ ಆರೋಪಿ.

ಆಶಿಷ್‌ ಮಿಶ್ರಾಗೆ ಜಾಮೀನು ನೀಡಿರುವುದನ್ನು ಲಖೀಂಪುರ ಖೇರಿ ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. 2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಗಲಭೆ ನಡೆದಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಲಾಗಿತ್ತು. ಆಶಿಷ್‌ ಮಿಶ್ರಾ ಈ ಪ್ರಕರಣದಲ್ಲಿ ಆರೋಪಿ. 2022ರ ಫೆಬ್ರವರಿ 10ರಂದು ಅಲಹಾಬಾದ್ ಹೈಕೋರ್ಟ್ ಆಶಿಷ್‌ ಮಿಶ್ರಾಗೆ ಜಾಮೀನು ನೀಡಿತ್ತು. ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿದ್ದರು.

ಹಾಂಗ್‌ಕಾಂಗ್‌ಗೆ ಏರ್ ಇಂಡಿಯಾ ವಿಮಾನ ರದ್ದು ಸೋಮವಾರ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ಹೈಕೋರ್ಟ್ ಅನಗತ್ಯ ಅಂಶಗಳನ್ನು ಪರಿಗಣಿಸಿದೆ ಎಂದು ಹೇಳಿದೆ ಮತ್ತು ಆಶಿಷ್ ಮಿಶ್ರಾ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.