ಮನೆ ರಾಜ್ಯ ಜಮೀನು ವ್ಯಾಜ್ಯ – ನಿರ್ದೇಶಕ ಟಿ.ಎನ್.ಸೀತಾರಾಮ್‌ ಪ್ರಕರಣಕ್ಕೆ ಹೈಕೋರ್ಟ್ ತಡೆ‌..!

ಜಮೀನು ವ್ಯಾಜ್ಯ – ನಿರ್ದೇಶಕ ಟಿ.ಎನ್.ಸೀತಾರಾಮ್‌ ಪ್ರಕರಣಕ್ಕೆ ಹೈಕೋರ್ಟ್ ತಡೆ‌..!

0

ಬೆಂಗಳೂರು : ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಟಿ.ಎನ್.ಸೀತಾರಾಮ್‌ ಮೇಲಿನ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ ರದ್ದು ಕೋರಿ ಟಿಎನ್ ಸೀತಾರಾಮ್ ಸಹೋದರಿ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರಜಾಕಾಲದ ಏಕಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.

ಐದು ಎಕರೆ ಜಮೀನು ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟಿಎನ್ ಸೀತಾರಾಮ್, ಸಹೋದರಿ ವಿಜಯಲಕ್ಷ್ಮಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.