ಮನೆ ಕಾನೂನು ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

0

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರರಾದ ಆರ್‌ಜೆಡಿ ಮುಖಂಡರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಸೋಮವಾರ(ಅ.7) ಜಾಮೀನು ನೀಡಿದೆ.

Join Our Whatsapp Group

ವಾದ ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯ ಇಡಿ ಚಾರ್ಜ್ ಶೀಟ್ ನಲ್ಲಿ ತೇಜ್ ಪ್ರತಾಪ್ ಯಾದವ್ ಅವರನ್ನು ಆರೋಪಿಯನ್ನಾಗಿ ಮಾಡಿಲ್ಲ, ಆದರೆ ತೇಜ್ ಪ್ರತಾಪ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡುವಾಗ ನ್ಯಾಯಾಲಯ ತೇಜ್ ಪ್ರತಾಪ್ ಯಾದವ್ ಕೂಡ ಲಾಲು ಯಾದವ್ ಕುಟುಂಬದ ಸದಸ್ಯ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಅವರ ಪಾತ್ರವನ್ನು ಅಲ್ಲಗಳೆಯುವಂತಿಲ್ಲ ಎಂದು ಹೇಳಿತ್ತು. ಅಪಾರ ಪ್ರಮಾಣದ ಭೂಮಿ ಮತ್ತು ಆಸ್ತಿಗಳನ್ನು ಹಸ್ತಾಂತರಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು. ಯಾದವ್ ಕುಟುಂಬ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ನಿವೇಶನಗಳನ್ನು ಯಾದವ್ ಕುಟುಂಬದ ಹೆಸರಿಗೆ ವರ್ಗಾಯಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

ಆರೋಪಿಗಳಿಗೆ ಜಾಮೀನು ನೀಡುವಾಗ, ಅವರನ್ನು ಬಂಧಿಸದೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ, ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಎಲ್ಲರಿಗೂ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಎಲ್ಲಾ ಮೂವರು ತಮ್ಮ ಪಾಸ್‌ಪೋರ್ಟ್‌ಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಸೂಚಿಸಿದ್ದು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ.

ಆರೋಪ ಏನು:

2004 ರಿಂದ 2009 ರವರೆಗೆ ಭಾರತೀಯ ರೈಲ್ವೇಯ ವಿವಿಧ ವಲಯಗಳಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು ಇದಕ್ಕೆ ಪ್ರತಿಯಾಗಿ ಜನರಿಂದ ಅವರ ಜಮೀನನ್ನು ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಯಾದವ್ ಅವರು ಹಾಗೂ ಅವರ ಕುಟುಂಬಡಾ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದರು ಎಂದು ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಸಿಬಿಐ ಅಕ್ಟೋಬರ್ 10, 2022 ರಂದು ಚಾರ್ಜ್ ಶೀಟ್ ಸಲ್ಲಿಸಿತ್ತು, ಅದರಲ್ಲಿ 16 ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಇದಾದ ಬಳಿಕ ದೆಹಲಿ ನ್ಯಾಯಾಲಯವು 28 ಫೆಬ್ರವರಿ 2023 ರಂದು ಲಾಲು ಯಾದವ್, ರಾಬ್ರಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ವಿರುದ್ಧ ಸಮನ್ಸ್ ಜಾರಿ ಮಾಡಿತ್ತು.