ದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಇಂದು ಸಿಬಿಐ ನೋಟಿಸ್ ಜಾರಿ ಮಾಡಿದೆ.
ಶುಕ್ರವಾರದಂದು ಅವರ ಮನೆ ಮೇಲೆ ಮಾ.10ರಂದು ಇ.ಡಿ ದಾಳಿಯನ್ನು ನಡೆಸಿತ್ತು. ಇಂದು ಅವರನ್ನು ಸಿಬಿಐ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಮಾರ್ಚ್ 4 ರಂದು ತೇಜಸ್ವಿ ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಶನಿವಾರದಂದು ಮತ್ತೆ ನೋಟಿಸ್ ನೀಡಿ ವಿಚಾರಣೆ ಬರುವಂತೆ ಹೇಳಲಾಗಿದೆ.
ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕನನ್ನು ಶನಿವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಆದರೆ ಅವರು ಇನ್ನೂ ಕೇಂದ್ರೀಯ ತನಿಖಾ ದಳದ (ಸಿಬಿಐ) ಪ್ರಧಾನ ಕಚೇರಿಗೆ ಆಗಮಿಸಿಲ್ಲ ಎಂದು ಸಿಬಿಐ ತಿಳಿಸಿದೆ.
ಇತ್ತೀಚೆಗೆ ತನಿಖಾ ದಳಗಳು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಅವರನ್ನು ದೆಹಲಿ ಮತ್ತು ಪಾಟ್ನಾದಲ್ಲಿ ಪ್ರಶ್ನಿಸಿತ್ತು. ನಂತರ ಮಾರ್ಚ್ 10ರಂದು ಇ.ಡಿ ತೇಜಸ್ವಿ ಯಾದವ್ ಅವರ ಮನೆಯ ಮೇಲೆ ದಾಳಿಯನ್ನು ನಡೆಸಿತ್ತು.
ಈ ಪ್ರಕರಣವು ಲಾಲು ಪ್ರಸಾದ್ ಯಾದವ್ ಕುಟುಂಬ ಮತ್ತು ಅದರ ಸಹಚರರಿಗೆ ಭೂಮಿಗಳನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡುವುದಕ್ಕೆ ಪ್ರತಿಯಾಗಿ ರೈಲ್ವೆಯಲ್ಲಿ ಉದ್ಯೋಗವನ್ನು ನೀಡಲಾಗಿದೆ ಎಂದು ಹೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.