ಮನೆ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ:  ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ:  ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

0

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ಹಲವಾರು ಮನೆಗಳು ನಾಶವಾಗಿದ್ದು, ಅನೇಕ ಜನರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಭೂಕುಸಿತದಿಂದ ಇಳಿಜಾರು ಪ್ರದೇಶದಲ್ಲಿದ್ದ ಅನೇಕ ಬಹುಮಹಡಿ ಕಟ್ಟಡಗಳು ಕುಸಿದು ಬೀಳುವ ಭೀಕರ ದೃಶ್ಯ ಸೆರೆಯಾಗಿದೆ, ಅಲ್ಲದೆ ಕಟ್ಟಡ ಕುಸಿದು ಬಿದ್ದ ಸ್ಥಳದಲ್ಲಿ ದಟ್ಟ ಧೂಳು ಆವರಿಸಿದೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ಸುಮಾರು ಹನ್ನೆರಡು ಮಂದಿ ಮೃತಪಟ್ಟಿದ್ದು ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

https://twitter.com/Samantha_eth__/status/1694576216354017498?s=20

ಭಾರೀ ಮಳೆಯಿಂದ ಉಂಟಾದ ಮೇಘಸ್ಫೋಟ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ 12 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬುಧವಾರ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಇದುವರೆಗೆ ಮಳೆಯಿಂದ ಸಂಭವಿಸಿದ ಭೂಕುಸಿತದಿಂದಾಗಿ 400 ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಆಗಿದ್ದು ಮತ್ತು ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.