ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದೆ. ಭೂಕುಸಿತವು 1,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಈ ಅವಘಡದಲ್ಲಿ ಬದುಕುಳಿದಿದ್ದು, ಮಾತ್ರ ಒಬ್ಬನೇ ಒಬ್ಬ ವ್ಯಕ್ತಿ ಎಂದು ವರದಿಯಾಗಿದೆ.
ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮ ಭೂಕುಸತಕ್ಕೆ ಬಲಿಯಾಗಿದ್ದು, ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ ತಿಳಿಸಿದೆ.
ಭೂಕುಸಿತದ ಪರಿಣಾಮ ಇಡೀ ಹಳ್ಳಿಯೇ ಭೂಸಮಾಧಿಯಾಗಿದ್ದು, 1,000ಕ್ಕೂ ಹೆಚ್ಚು ಜನರು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಒಬ್ಬ ಮಾತ್ರ ಬದುಕುಳಿದಿದ್ದಾನೆ. ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಇನ್ನೂ ಹೂತುಹೋಗಿರುವ ಸತ್ತವರನ್ನು ಹೊರತೆಗೆಯಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಇತರ ನೆರವು ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ.














