ಉತ್ತರಾಖಂಡ: ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿದ್ದು, ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್ ಡಿಆರ್‌ಎಫ್, ಎನ್ ಡಿಆರ್ ಎಫ್ ಮತ್ತು ಇತರ ತಂಡಗಳು ಸ್ಥಳದಲ್ಲಿವೆ.
ಎಸ್ ಪಿ ರುದ್ರಪ್ರಯಾಗ, ಡಾ.ವಿಶಾಖಾ ಮಾತನಾಡಿ, ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು. ಭಾರಿ ಮಳೆಯಿಂದಾಗಿ ಅಂಗಡಿಗಳ ಮೇಲೆ ಕಲ್ಲು ಬಂಡೆಗಳು ಬಿದ್ದಿದ್ದು, ಮೂರು ಅಂಗಡಿಗಳು ಹಾನಿಗೀಡಾಗಿವೆ. ಈ ಪ್ರದೇಶದಲ್ಲಿ ಸುಮಾರು 10-12 ಜನ ಇದ್ದರು ಎಂದು ಹೇಳಲಾಗಿದೆ. ಇಲ್ಲಿವರೆಗೆ ಯಾರೊಬ್ಬರೂ ಪತ್ತೆಯಾಗಿಲ್ಲ.
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಗೌರಿಕುಂಡ್ ಬಳಿ ದೊಡ್ಡ ಭೂಕುಸಿತದಿಂದಾಗಿ ನಾಶವಾದ ಅಂಗಡಿಗಳ ಅವಶೇಷಗಳಲ್ಲಿ ಹಲವರು ಹೂತುಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಉತ್ತರಾಖಂಡದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.