ಕಠ್ಮಂಡು(Kathmandu): ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯ ಹಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ.
ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ಈ ಕುರಿತು ಮಾಹಿತಿ ನೀಡಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ. 10 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಭೂಕುಸಿತ ಸಂಭವಿಸಿರುವ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಲಿಕಾಪ್ಟರ್ಗಳನ್ನು ನಿಯೋಜಿಸುವಂತೆ ನೇಪಾಳದ ಗೃಹ ಸಚಿವರು ಆದೇಶಿಸಿದ್ದಾರೆ.














