ಶ್ರೀನಗರ (Srinagar): ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ನಡೆದ ಎನ್‌ಕೌಂಟರ್ ನಲ್ಲಿ ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಜೂನ್ 30ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಮೂವರು ಉಗ್ರರು ಯೋಜನೆ ರೂಪಿಸಿದ್ದರು. ಪಾಕಿಸ್ತಾನದ ಇಬ್ಬರು ಉಗ್ರರು ಹಾಗೂ ಒಬ್ಬ ಸ್ಥಳೀಯ ಉಗ್ರ ಸೇರಿ ರೂಪಿಸಿದ್ದ ಯೋಜನೆಯನ್ನು ವಿಫಲಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಣಿವೆ ನಾಡಿನಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿರುವ ಬೆನ್ನಲ್ಲೇ ಭಯೋತ್ಪಾದಕರ ನಿಗ್ರಹಕ್ಕೆ ಶೋಧ ಕಾರ್ಯಾಚರಣೆ ಹೆಚ್ಚಿಸಲಾಗಿದೆ.