ಮೈಸೂರು(Mysuru): ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ ಎಂದು ಉರಗತಜ್ಞ ಸ್ನೇಕ್ ಶ್ಯಾಮ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇಂದು ವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗತಜ್ಞ ಸ್ನೇಕ್ ಶಾಮ್ ಹಾಗೂ ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಷನ್ ರಾಜ್ ಕುಮಾರ್ ‘ಸೂರ್ಯ ಕೀರ್ತಿ ಮತ್ತು ಪ್ರದೀಪ್ ರವರಿಗೆ ಪರಿಸರ ಸ್ನೇಹಿ ತಂಡದ ವತಿಯಿಂದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಮಿಶ್ರಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ. ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಹೇಳಿದರು.
ಉರಗಗಳ ಬಗೆಗೆ ವಿಶೇಷ ಮಾಹಿತಿಯನ್ನು ನೀಡಿದರು. ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಸಚಿತ್ರ ಮಾಹಿತಿ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಷನ್ ಡಿ. ರಾಜಕುಮಾರ್ ಮಾತನಾಡಿ, ಹಾವನ್ನ ನಾವು ಜೀವಭಯದಿಂದ ಹಿಡಿಯಬಾರದು ವೈಜ್ಞಾನಿಕವಾಗಿ ಜೀವರಕ್ಷಣೆಯಿಂದ ಹಿಡಿಯಬೇಕು, ಹಬ್ಬ ಹರಿದಿನ ಇತಿಹಾಸದಲ್ಲೂ ಸಹ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಸಹ ನಮ್ಮ ಪೂರ್ವಜರು ಪೂಜ್ಯ ಸ್ಥಾನ ನೀಡಿದ್ದಾರೆ, ಮಕ್ಕಳು ಸಣ್ಣ ವಯಸ್ಸಿನಲ್ಲೇ ಪರಿಸರ ಸಂರಕ್ಷಣೆ ಕಾಳಜಿ ಬೆಳೆಸಿಕೊಳ್ಳವಲ್ಲಿ ಮುಂದಾಗಬೇಕು ಎಂದರು
ಎನ್.ಎಂ ನವೀನ್ ಕುಮಾರ್ ಮಾತನಾಡಿ, ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ರವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ, ಅಷ್ಟೇಅಲ್ಲದೇ 85ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ, ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ, ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ರವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು
ಇದೇ ಸಂದರ್ಭದಲ್ಲಿ ಇಳೆಯಾಳ್ವಾರ್ ಸ್ವಾಮೀಜಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ, ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೃಗಾಲಯ ಪ್ರಾಧಿಕಾರ ಸದಸ್ಯರಾದ ಜ್ಯೋತಿ ರೇಚಣ್ಣ, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸುಚೇಂದ್ರ, ಚಕ್ರಪಾಣಿ, ಶಿಕ್ಷಕರಾದ ಚಂಪಾಶ್ರೀ ,ಮಮತಾ, ದಿವ್ಯ ಹಾಗೂ ಇನ್ನಿತರರು ಹಾಜರಿದ್ದರು.