ಮನೆ ರಾಜಕೀಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಸಿದ್ದರಾಮಯ್ಯ

0

ಮೈಸೂರು(Mysuru): ರಾಜ್ಯದಲ್ಲಿ ಸರ್ಕಾರವೇ ಇಲ್ಲ, ಸರ್ಕಾರ ಸತ್ತು ಹೋಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ನಡೆದಿರುವ ಹತ್ಯೆ ಪ್ರಕರಣಗಳ ಕುರಿತು ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರಿಗೆ ಆಡಳಿತ ನಡೆಸುವ ತಾಕತ್ತಿಲ್ಲ. ಮಂಗಳೂರಿನ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.

ಇದು ಮುಖ್ಯಮಂತ್ರಿ, ಗೃಹ ಸಚಿವರ ವೈಫಲ್ಯ‌. ಮುಖ್ಯಮಂತ್ರಿ ಅಲ್ಲೇ ಇದ್ದಾಗ ಕೊಲೆ ಆಗಿದೆ.  ಅಂದರೆ ಇಂಟಲಿಜೆನ್ಸ್ ವೈಫಲ್ಯ ಅಲ್ವ ? ಇದು ಸರ್ಕಾರ, ಸಿಎಂ, ಗೃಹ ಸಚಿವರ ವೈಫಲ್ಯ ಅಲ್ವ ? ಜನ ಮನೆಯಿಂದ ಆಚೆ ಬರಲು ಭಯ ಪಡುವ ಸನ್ನಿವೇಶ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ರಾಜ್ಯ ಉತ್ತರ ಪ್ರದೇಶ ಆಗಿಬಿಟ್ಟಿದಿಯಾ ? ಇದನ್ನು ನೀವೇ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದೀರಾ..? ಎಂದು ಪ್ರಶ್ನಿಸಿದ ಸಿದ್ಧರಾಮಯ್ಯ, ಬುಲ್ಡೋಜರ್ ಸರ್ಕಾರದ ಅಗತ್ಯವಿದೆಯಾ? ಯುಪಿ ಮಾದರಿ ರಾಜ್ಯ ಬದಲಾಗಿದೆಯಾ? ಬಿಹಾರ ರಾಜ್ಯದ ರೀತಿ ಆಗಿದೆಯಾ? ಯುಪಿ ರೀತಿ ಆಗಿದೆ ಎಂದು ಒಪ್ಪಿಕೊಂಡಂತೆ ಆಗುತ್ತಿದೆ. ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಆ ರೀತಿ ರಾಜ್ಯದಲ್ಲೂ ಆಗಿಬಿಡುತ್ತದೆಯೆ?  ಎಂದು ಪ್ರಶ್ನಿಸಿದರು.

ಮಾತೆತ್ತಿದರೆ ಹಿಂದಿನ ಕಾಲದಲ್ಲಿ ಮಾಡಿದ್ದಾರೆ ಅಂತೀರಾ? ನಮಗೆ ಹೋಲಿಕೆ ಮಾಡಲು ಅಧಿಕಾರಿಕ್ಕೆ ಬಂದಿದ್ದೀರಾ? ಸಿದ್ದರಾಮಯ್ಯ ಸರ್ಕಾರದ ರೀತಿಯ ಸರ್ಕಾರ ಮಾಡುತ್ತೇವೆ ಅಂತ ಹೇಳಿದ್ರಾ ? ಜನರಿಗೆ ಆ ರೀತಿ ಭರವಸೆ ನೀಡಿ ಬಂದಿದ್ದೀರಾ? ಎಂದು ವಾಗ್ದಾಳಿ ನಡೆಸಿದರು.

ಸೂಕ್ತ ಸಾಕ್ಷ್ಯಾಧಾರವಿದ್ದರೆ ಎಸ್ ಡಿಪಿಐ ಬ್ಯಾನ್ ಮಾಡಿ

ಸಿದ್ದರಾಮಯ್ಯ ಸರ್ಕಾರದಲ್ಲಿ ಕೋಮುಗಲಭೆ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದರಿಂದಲೇ ರಾಜ್ಯದಲ್ಲಿ ಗಲಭೆಗಳು ಸೃಷ್ಟಿ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ನನ್ನ ಅವಧಿಯಲ್ಲಿ ಮಾತ್ರ ಅಲ್ಲ, ಎಲ್ಲಾ ಸರ್ಕಾರಗಳಲ್ಲೂ ಕೇಸ್ ವಾಪಸ್ ಪಡೆದಿದ್ದಾರೆ. ಮೈಸೂರಿನಲ್ಲಿ ನಡೆದಿದ್ದ ಗಲಭೆಯಲ್ಲಿ ವಿದ್ಯಾರ್ಥಿಗಳ ಮೇಲೂ‌ ಕೇಸ್ ದಾಖಲಾಗಿತ್ತು. ಅವರ ಭವಿಷ್ಯದ ಹಿತದೃಷ್ಟಿಯಿಂದ ಕೇಸ್ ವಾಪಸ್ ತೆಗೆದುಕೊಳ್ಳಲಾಗಿತ್ತು. ಈಗ ಬಿಜೆಪಿಯವರಿಗೆ ಎಸ್.ಡಿ.ಪಿ.ಐ ಮೇಲೆ ಕೋಪವಿದ್ರೆ ಆ ಸಂಘಟನೆಯನ್ನು ಬ್ಯಾನ್ ಮಾಡಿ. ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಬ್ಯಾನ್ ಮಾಡಿ ಎಂದು ಸಲಹೆ ನೀಡಿದರು.

ಹಿಂದಿನ ಲೇಖನಮಲ್ಲಿಕಾರ್ಜುನ, ಭಮರಾಂಬಿಕೆಯ ನೆಲವೀಡು ಮುಡುಕುತೊರೆ
ಮುಂದಿನ ಲೇಖನಆಗಸ್ಟ್ 2 ರಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ