ಮನೆ ರಾಜ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯತೀಂದ್ರ ಸಿದ್ಧರಾಮಯ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯತೀಂದ್ರ ಸಿದ್ಧರಾಮಯ್ಯ

0

ಮೈಸೂರು(Mysuru):  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಿಜೆಪಿ ಸರ್ಕಾರ ಜನರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸಿದ್ದರಾಮೋತ್ಸವ ಕಾರ್ಯಕ್ರಮದ ಪ್ರಯುಕ್ತ ವರುಣ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಪ್ರವಾಸ ಕೈಗೊಂಡು ಕಾರ್ಯಕರ್ತರ ಜತೆ ಸಮಾಲೋಚಿಸಿ ಬಳಿಕ  ಮಾಧ್ಯಮಗಳ ಜತೆ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳ ಪ್ರಕರಣಗಳಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾತೆತ್ತಿದರೆ ಬಿಜೆಪಿ ನಾಯಕರುಗಳು ಕಾಂಗ್ರೆಸ್ ಪಕ್ಷದ ವಿರುದ್ಧ ಆಪಾದನೆ ಮಾಡುವುದನ್ನು ಬಿಟ್ಟು ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ,  ಸೂಕ್ತ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ನಾಯಕರುಗಳಿಗೆ ತಿರುಗೇಟು ನೀಡಿದರು.

ಈ ಸಂದರ್ಭದಲ್ಲಿ ಯುವ ನಾಯಕ ಸುನಿಲ್ ಬೋಸ್, ಹೆಜ್ಜಿಗೆ ಇಂಧನ ಬಾಬು, ಬಿಪಿ ಮಹದೇವು ತರಗನಹಳ್ಳಿ ನಂಜುಂಡಸ್ವಾಮಿ, ಚಿನ್ನದ ಗುಡಿ  ಹುಂಡಿ ಬಸವೇಗೌಡ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದಿನ ಲೇಖನಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಆದೇಶ ಕಾಯ್ದಿರಿಸಿದ ಇಡಿ ಕೋರ್ಟ್
ಮುಂದಿನ ಲೇಖನಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ