ಬೆಂಗಳೂರು(Bengaluru): ವೈಯಕ್ತಿಕ ದ್ವೇಷದಿಂದ ಚಂದ್ರ ಶೇಖರ್ ಗುರೂಜಿ ಅವರ ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಂದ್ರಶೇಖರ್ ಗುರೂಜಿ ಹತ್ಯೆಯಲ್ಲಿ ಕಾನೂನು ಸುವ್ಯವಸ್ಥೆ ಲೋಪವಲ್ಲ, ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದೆ. ಇಂದಿನ ಯುವಕರ ಮನಸ್ಥಿತಿಯಿಂದಾಗಿ ಈ ರೀತಿ ಹತ್ಯೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪ ಸುಳ್ಳು ಎಂದು ತಿರುಗೇಟು ನೀಡಿದರು.
ಇನ್ನು ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಹಾನಿಯಾಗಿದೆ. ತುರ್ತು ಗಮನ ಹರಿಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇನೆ. ಜಿಲ್ಲಾಧಿಕಾರಿಗಳ ಜತೆ ಸಭೆಯನ್ನು ನಡೆಸಲಿದ್ದೇನೆ ಎಂದು ತಿಳಿಸಿದರು.














