ಸ್ಟಾಕ್‌ಹೋಮ್ (ಸ್ವೀಡನ್): ಬಿಲಾರಸ್‌ನ ಮಾನವ ಹಕ್ಕುಗಳ ವಕೀಲ ಅಲೆಸ್ ಬಿಲಿಯಾಟ್‌ಸ್ಕಿ, ರಷ್ಯಾದ ಮಾನವ ಹಕ್ಕುಗಳ ಸಂಸ್ಥೆಯಾದ ‘ಮೆಮೊರಿಯಲ್’ ಮತ್ತು ಉಕ್ರೇನಿನ ಮಾನವ ಹಕ್ಕುಗಳ ಸಂಸ್ಥೆ ‘ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್’ಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದೆ.
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತರು ತಮ್ಮ ತಾಯ್ನಾಡಿನಲ್ಲಿ ನಾಗರಿಕ ಸಮಾಜವನ್ನು ಪ್ರತಿನಿಧಿಸುತ್ತಿದ್ದಾರೆ.
ಆಡಳಿತಶಾಹಿಯನ್ನು ಟೀಕಿಸುವ ಮತ್ತು ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಹಕ್ಕನ್ನು ಅವರು ಹಲವಾರು ವರ್ಷಗಳಿಂದ ಆಗ್ರಹಿಸುತ್ತಾ ಬಂದಿದ್ದಾರೆ.
ಯುದ್ಧಾಪರಾಧಗಳು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಧಿಕಾರದ ದುರುಪಯೋಗವನ್ನು ದಾಖಲಿಸಲು ಅವರು ಪ್ರಯತ್ನಪಟ್ಟಿದ್ದಾರೆ. ಶಾಂತಿ ಮತ್ತು ಪ್ರಜಾಪ್ರಭುತ್ವಕ್ಕಾಗಿ ನಾಗರಿಕ ಸಮಾಜದ ಮಹತ್ವವನ್ನು ಅವರು ಪ್ರತಿಪಾದಿಸಿದ್ದಾರೆ ಎಂದು ನೊಬೆಲ್ ಸಮಿತಿ ಹೇಳಿದೆ.