ಶಿವಮೊಗ್: ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಬಿಜೆಪಿಯಲ್ಲೇ ಇದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆಯಾಗುತ್ತೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಅಥಣಿ ಕ್ಷೇತ್ರದ ಟಿಕೆಟ್ ಮಹೇಶ್ ಕುಮಟಳ್ಳಿ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಡುವೆ ಫೈಟ್ ಇದ್ದು, ಲಕ್ಷ್ಮಣ್ ಸವದಿಗೆ ಟಿಕೆಟ್ ಕೈತಪ್ಪಿದರೇ ತನ್ನತ್ತ ಸೆಳೆಯಲು ಕಾಂಗ್ರೆಸ್ ಗಾಳ ಹಾಕಿದೆ ಎಂಬ ಮಾತು ಕೇಳಿಬಂದ ಬೆನ್ನಲ್ಲೇ ಅಶ್ವಥ್ ನಾರಾಯಣ್ ಶಿವಮೊಗ್ಗದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿಲ್ಲ. ನಾಮಪತ್ರ ಸಲ್ಲಿಕೆ ಮುಂಚೆ ಮೊದಲ ಪಟ್ಟಿ ಬಿಡುಗಡೆ ಪ್ರಕ್ರಿಯೆ ಸಾಮಾನ್ಯ. ಉತ್ತಮ ಗೆಲ್ಲುವ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇರ್ತಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Saval TV on YouTube