ಮನೆ ಅಪರಾಧ ಗ್ಯಾಸ್​ ಗೀಸರ್​ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಯುವಕ-ಯುವತಿ ಉಸಿರುಗಟ್ಟಿ ಸಾವು

ಗ್ಯಾಸ್​ ಗೀಸರ್​ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಯುವಕ-ಯುವತಿ ಉಸಿರುಗಟ್ಟಿ ಸಾವು

0

ಬೆಂಗಳೂರು: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ ​ರೂಮ್ ​ನಲ್ಲಿ ಗ್ಯಾಸ್​ ಗೀಸರ್ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.

Join Our Whatsapp Group

ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ ​​ನ ಸುಧಾರಾಣಿ ಮೃತ ದುರ್ವೈವಿಗಳು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್​ ಗೀಸರ್​ ಆನ್ ಮಾಡಿ ಬಾತ್​ರೂಮ್​ ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್​ ಗೀಸರ್ ​ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್ ​ರೂಮ್​ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.