ಮನೆ ಸುದ್ದಿ ಜಾಲ ಅಪರಿಚಿತರು ನೀಡಿದ ಲಿಂಕ್ ನಿಂದ 14 ಲಕ್ಷ ಹಣ ಕಳೆದು ಕೊಂಡ ಉಪನ್ಯಾಸಕ : ದಾವಣಗೆರೆ

ಅಪರಿಚಿತರು ನೀಡಿದ ಲಿಂಕ್ ನಿಂದ 14 ಲಕ್ಷ ಹಣ ಕಳೆದು ಕೊಂಡ ಉಪನ್ಯಾಸಕ : ದಾವಣಗೆರೆ

0

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಈ ಕುರಿತು ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ. ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ. ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.