ಮಂಡ್ಯ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕುರಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕುರಿ ಕೊಟ್ಟಿಗೆ ಬಳಿ ಮನೆಯ ಕಾಂಪೌಂಡ್ ಏರಿ ನಿಂತು ಕುರಿಗಳ ಮೆಲೆ ದಾಳಿ ನಡೆಸಲು ಸ್ಕೇಚ್ ಹಾಕುತ್ತಿರುವ ಚಿರತೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿರತೆ ಸುಮಾರು 100 ಕುರಿಗಳ ಮೇಲೆ ದಾಳಿ ನಡೆಸಿದೆ.
ಕಳೆದ 15 ದಿನಗಳಿಂದ ಗ್ರಾಮದಲ್ಲೇ ಬೀಡುಬಿಟ್ಟಿರುವ ಚಿರತೆ ಆತಂಕ ಸೃಷ್ಟಿಸಿದೆ.
ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕುರಿಗಳ ಕಳೆದುಕೊಂಡು ಗ್ರಾಮಸ್ಥರು ಕಂಗಾಲಾಗಿದ್ದಾರೆ.
ತಕ್ಷಣವೇ ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.