ಮಂಡ್ಯ: ಕೆ.ಆರ್.ಪೇಟೆ ತಾಲೂಕಿನಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ರೈತನ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ರೈತ ಮಾರಣಾಂತಿಕವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ರೈತ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ರೈತ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಲೆ, ಮುಖ, ಸೇರಿದಂತೆ ಹಲವು ಕಡೆ ರೈತನಿಗೆ ಗಾಯಗಳಾಗಿದ್ದು, ಪಟ್ಟಣದ ಆಸ್ಪತ್ರೆ ಯಲ್ಲಿ ರೈತನ ಗಾಯಕ್ಕೆ ಹೊಲಿಗೆ ಹಾಕಿ ಚಿಕಿತ್ಸೆ ನೀಡಲಾಗಿದೆ.
ಚಿರತೆ ಹಾವಳಿಯ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನಾದ್ಯಂತ ಚಿರತೆ ಹಾವಳಿಗೆ ಜನರು ಹೈರಾಣಾಗಿದ್ದಾರೆ.