ಹಾಸನ: ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಒಂದು ಹಸು ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ನಡೆದಿದೆ.
ಗ್ರಾಮದಲ್ಲಿ ಒಂದೇ ವಾರದಲ್ಲಿ ಆರು ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆದಿದೆ.
ಇದೀಗ ಹಾಡು ಹಗಲಿನಲ್ಲಿಯೇ ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ.
ಗ್ರಾಮಕ್ಕೆ ಎಸಿಎಫ್, ಆರ್ ಎಫ್ ಒ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನಿಟ್ಟರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.